ಏ.೫ ರಂದು ಡಾ||ಬಾಬು ಜಗಜೀವನರಾಂ ಹಾಗೂ ದಲಿತ ವಚನಕಾರರ ಜಯಂತಿ

 : ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿರುವ ಡಾ|| ಬಾಬು ಜಗಜೀವನರಾಂ ಅವರ ಹಾಗೂ ದಲಿತ ವಚನಕಾರರ ಜಯಂತಿ ಕಾರ್ಯಕ್ರಮ ಏ.೦೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. 
  ಇದಕ್ಕೂ ಮುನ್ನ ಅಂದು ಬೆಳಿಗ್ಗೆ ೭.೩೦ ಗಂಟೆಗೆ ನಗರದ ತಹಶೀಲ್ದಾರ ಕಛೇರಿಯಿಂದ ಮಹನಿಯರ ಭಾವಚಿತ್ರದ ಮೆರವಣಿಗೆ ಆರಂಭಗೊಳ್ಳಲಿದ್ದು, ಡಾ|| ಬಾಬು ಜಗಜೀವನರಾಂ ವೃತ್ತ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ. ಈ ಕಾರ್ಯಕ್ರಮಗಳಿಗೆ ಎಲ್ಲಾ ಕಛೇರಿಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು  ತಿಳಿಸಿದ್ದಾರೆ. 

Leave a Reply