You are here
Home > Koppal News > ಉಪಮುಖ್ಯಮಂತ್ರಿಗಳಿಂದ ನೂತನ ಕೊಠಡಿ ಉದ್ಘಾಟನೆ, ಸೈಕಲ್ ವಿತರಣೆ

ಉಪಮುಖ್ಯಮಂತ್ರಿಗಳಿಂದ ನೂತನ ಕೊಠಡಿ ಉದ್ಘಾಟನೆ, ಸೈಕಲ್ ವಿತರಣೆ

ಕೊಪ್ಪಳ : ಕೊಪ್ಪಳ ನಗರದ ಸರದಾರಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹೆಚ್ಚುವರಿ ನೂತನ ಕೊಠಡಿಗಳ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ನೆರವೇರಿಸಿದರು.: ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸೈಕಲಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಂಗಣ್ಣ ಕರಡಿ, ಪರಣ್ಣ ಮುನವಳ್ಳಿ, ಸಂಸದ ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ, ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ನಗರಸಭೆ ಸದಸ್ಯ ಮಾನ್ವಿ ಪಾಷಾ, ಪ್ರಭಾರಿ ಉಪನಿರ್ದೇಶಕ ದಾಸರವರು, ಡಯಟ್ ಹಿರಿಯ ಉಪನ್ಯಾಸಕ ಉಮೇಶ ಪೂಜಾರ, ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಶರಣಬಸನಗೌಡ ಪಾಟೀಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಶಿಕ್ಷಣ ಸಂಯೋಜಕರು ಉಪಸ್ಥಿತರಿದ್ದರು. 

Leave a Reply

Top