ರಾಷ್ಟ್ರೀಯ ಗ್ರಾಹಕರ ದಿನಾಚರಣೆ : ಡಿ. ೨೬ ರಂದು ಭಾಗ್ಯನಗರದಲ್ಲಿ ಕಾರ್ಯಕ್ರಮ

ಕೊಪ್ಪಳ ಡಿ. : ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ, ಭಾಗ್ಯನಗರ ಮತ್ತು ಭವಾನಿ ಮಹಿಳಾ ಸೇವಾ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಡಿ. ೨೬ ರಂದು ಬೆಳಿಗ್ಗೆ ೧೦ ಗಂಟೆಗೆ ಭಾಗ್ಯನಗರದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ.
  ಕೊಪ್ಪಳ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಭಾಗ್ಯನಗರದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಶಾಲೆಯ ಮುಖ್ಯೋಪಾಧ್ಯಾಯ ವಾದಿರಾಜ ದೇಸಾಯಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯರುಗಳಾದ ಬಿ. ಶಿವರೆಡ್ಡಿ ಗೌಡ ಮತ್ತು ವೇದಾಜೋಶಿ ಹಾಗೂ ಎನ್.ಬಿ. ಮಾರನಬಸರಿ ಅವರು ಕಾನೂನು ಮಾಪನ ಶಾಸ್ತ್ರ ಇಲಾಖೆ ಬಗ್ಗೆ ಜಾಗೃತಿ ಸಂದೇಶ ನೀಡಲಿದ್ದಾರೆ.  ಇದೇ ಸಂದರ್ಭದಲ್ಲಿ ವಕೀಲರಾದ ರಾಘವೇಂದ್ರ ಪಾನಘಂಟಿ ಅವರು ವಿಶೇಷ ಉಪನ್ಯಾಸ ನೀಡುವರು.  ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್ತಿನ ಸದಸ್ಯ ಕಾರ್ಯದರ್ಶಿ ಬಿ.ಪಿ. ಅಡ್ನೂರ್, ಆಹಾರ ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
Please follow and like us:
error