ಗುರುಸ್ಮರಣೋತ್ಸವದ ನಿಮಿತ್ಯ ಪಾದಯಾತ್ರೆ

ಕೊಪ್ಪಳ-02- ಸಂಸ್ಥಾನ ಶ್ರೀಗವಿಮಠದಲ್ಲಿ ಇಂದು ಶನಿವಾರ  ಶ್ರೀ ಮ.ನಿ.ಪ್ರ.ಜ.ಲಿಂ. ಶ್ರೀಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಪ್ರತಿ ವರ್ಷದ ಪದ್ಧತಿಯಂತೆ ಈ ಸಾರೆಯೂ ಬೆಳಿಗ್ಗೆ  ೬ ಗಂಟೆಗೆ ಶ್ರೀಗವಿಸಿದ್ಧೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರೀಮಳೆಮಲ್ಲೇಶ್ವರ ದೇವಸ್ಥಾದಿಂದ ಹೊರಟು ಬನ್ನಿಕಟ್ಟಿ, ಬಸ್ ನಿಲ್ದಾಣ, ಅಶೋಕ ಸರ್ಕಲ್, ಜವಾಹರ್ ರಸ್ತೆ, ಗಡಿಯಾರಕಂಭ ಹಾಗೂ ಶಾರದಾ ಚಿತ್ರ ಮಂದಿರ ಮಾರ್ಗವಾಗಿ ಶ್ರೀಗವಿಮಠದವರೆಗೆ ಪಾದಯಾತ್ರೆ ನಡೆಯಿತು.ಶ್ರೀ ಷ.ಬ್ರ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಹೆಬ್ಬಾಳ, ಶ್ರೀ ಹಿರಿಶಾಂತವೀರ ಸ್ವಾಮಿಗಳು ಹೂವಿನ ಹಡಗಲಿ ಭಾಗವಹಿಸಿದ್ದರು. ಬಳಗಾನೂರಿನ ಶ್ರೀ ಶಿವಶಾಂತವೀರ ಶರಣರು ಮಾರ್ಗದುದ್ದಕ್ಕೂ ಭಕ್ತಿಗೀತೆಗಳನ್ನು ಹಾಡುತ್ತಾ ಜನರನ್ನು ಆಕರ್ಷಿಸುತ್ತಿದ್ದರು. ನಗರ ಹಾಗೂ ಸುತ್ತಮುತ್ತಲಿನ ಭಕ್ತಾಧಿಗಳು  ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

Leave a Comment