ವಿವೇಕಾನಂದ ಶಾಲೆಯ ಮಕ್ಕಳಿಗೆ ಪ್ರಶಸ್ತಿ

 

ಕರ್ನಾಟಕ ರಾಜ್ಯ ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಸಾರ್ವಜನಿಕ ಶಿಕ್ಷಣ ಇಲಾಖೆ, ತುರ್ತುಸೇವೆಗಳ ಇಲಾಖೆ, ಪೋಲೀಸ್ ಇಲಾಖೆ, ಜಿಲ್ಲಾಡಳಿತ ಕೊಪ್ಪಳ, ಎನ್.ಸಿ.ಸಿ., ಎನ್.ಎಸ್.ಎಸ್. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಇಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಪತ್ತು ಕಡಿಮೆಗೊಳಿಸುವ ದಿನಾಚರಣೆಯಲ್ಲಿ ’ರಾಷ್ಟ್ರೀಯ ವಿಪತ್ತುಗಳು’ ಕುರಿತಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿನಿ ಅನುಷಾ ಎಂ. ರಾಜೂರ ತೃತೀಯ ಸ್ಥಾನ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವೈಭವಲಕ್ಷ್ಮೀ ಪ್ರಥಮ ಸ್ಥಾನ ಪಡೆದಿದ್ದಾರೆ. ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಪ್ರಶಸ್ತಿ ವಿಜೇತ ಮಕ್ಕಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಂಜಾನೆ ನಡೆದ ಜಾಗೃತಿ ರ‍್ಯಾಲಿಯಲ್ಲಿ ಶಾಲೆಯ ೧೦೦ ಕ್ಕೂ ಹೆಚ್ಚಿನ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಪಾಲ್ಗೊಂಡಿದ್ದರು.

Please follow and like us:
error