ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮ

 ಯಲಬುರ್ಗಾ ತಾಲೂಕು ಕುಕನೂರಿನಲ್ಲಿ ನೂತನ ಸರ್ಕ್ಯೂಟ್ ಹೌಸ್ ಕಟ್ಟಡ, ಕೇಂದ್ರೀಯ ಆದರ್ಶ ವಿದ್ಯಾಲಯ (ಭಾರತ ಸರ್ಕಾರ) ಕಟ್ಟಡ, ಇಟಗಿ.  ತಳಕಲ್‌ನ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಬಾಲಕಿಯರ ವಸತಿ ನಿಲಯ ಕಟ್ಟಡದ ಶಂಕುಸ್ಥಾಪನೆ ಸಮಾರಂಭ    ಕುಕನೂರಿನ ವಿದ್ಯಾಶ್ರೀ ಶಾಲಾ ಮೈದಾನದಲ್ಲಿ ನಡೆಯಿತು.
  ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ, ಲೋಕೋಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ, ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ, ಸಂಸದ ಶಿವರಾಮಗೌಡ, ಹಾವೇರಿ ಸಂಸದ ಶಿವಕುಮಾರ ಉದಾಸಿ,  ಶಾಸಕರು, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ,ಜಿ.ಪಂ. ಅಧ್ಯಕ್ಷರು, ಉಪಾಧ್ಯಕ್ಷೆ ರು, ಸದಸ್ಯರು  ತಾ.ಪಂ. ಸದಸ್ಯರುಗ್ರಾ.ಪಂ. ಅಧ್ಯಕ್ಷೆ ನಾಗರತ್ನ ಕಲ್ಮನಿ, ಇಟಗಿ ಗ್ರಾ.ಪಂ. ಅಧ್ಯಕ್ಷ ಶರಣಯ್ಯ ನೂರುಂದಯ್ಯ ಇಟಗಿ, ತಳಕಲ್ ಗ್ರಾ.ಪಂ. ಅಧ್ಯಕ್ಷ ಮಹ್ಮದ್ ಸಿರಾಜುದ್ದೀನ್ ಕೊಪ್ಪಳ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. .
Please follow and like us:
error