You are here
Home > Koppal News > ಸರ್ಕಾರಿ ಅಂಗವಿಕಲ ನೌಕರರ ಸಂಘದ ಪದಾಧಿಕಾರಿಗಳ ಸಭೆ

ಸರ್ಕಾರಿ ಅಂಗವಿಕಲ ನೌಕರರ ಸಂಘದ ಪದಾಧಿಕಾರಿಗಳ ಸಭೆ

 ಜಿಲ್ಲೆಯ ಕುಷ್ಟಗಿ ನಗರದಲ್ಲಿರುವ ವಿದ್ಯಾ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.೨೩ರ ಭಾನುವಾರ ಬೆಳಗ್ಗೆ ೧೧ ಘಂಟೆಗೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ಜಿಲ್ಲಾ ಹಾಗೂ ಘಟಕದ ಪದಾಧಿಕಾರಿಗಳ ಸಭೆಯನ್ನು ಕುಷ್ಟಗಿ ತಾಲೂಕ ಅಧ್ಯಕ್ಷರಾದ ಸಿದ್ರಾಮಪ್ಪ ಅಮರಾವತಿಯವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಸಭೆಯಲ್ಲಿ ಡಿಸೆಂಬರ್‌ನಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದ ಕುರಿತು ಚರ್ಚೆ ಹಾಗೂ ಅಂಗವಿಕಲತೆಯ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಸಭೆಯಲ್ಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಿಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ ಹಾಗೂ ನಾಲ್ಕು ತಾಲೂಕಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಕುಷ್ಟಗಿ ತಾಲೂಕ ಕಾರ್ಯದರ್ಶಿ ಅಶೋಕ ಕಟ್ಟಿಮನಿ ತಿಳಿಸಿದ್ದಾರೆ.

Leave a Reply

Top