ಅಪ್ರಾಪ್ತೆಯ ಅತ್ಯಾಚಾರ ಹಾಗೂ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ ಏ :  ಜಿಲ್ಲೆಯ ಕೊಪ್ಪಳ ತಾಲೂಕಿನ ಕೆಂಚನಡೋಣಿ ಗ್ರಾಮದ ಬಳಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಾಲಾಜಿ ಕಾರಬಾರಿ (೨೦) ಎಂಬಾತನಿಗೆ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಸಪ್ಪಣ್ಣವರ್ ತೀರ್ಪು ನೀಡಿದ್ದಾರೆ. ಕಳೆದ ೨೦೧೪ ರ ಮೇ. ೦೬ ರಂದು ಕೆಂಚನಡೋಣಿ ಗ್ರಾಮದ ಹೊಲವೊಂದರಲ್ಲಿ ಬಾಲಾಜಿ ಕಾರಬಾರಿ (೨೦), ಸುರೇಶ ಕಾರಬಾರಿ (೧೭) ಹಾಗೂ ನಿಂಗಪ್ಪ ಕಾರಬಾರಿ (೧೭) ಆರೋಪಿಗಳು ೧೨ ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿದ್ದರು.  ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಪ್ರಕರಣ ಕುರಿತು ವಿಚಾರಣೆ ನಡೆಸಿದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಆರೋಪಿ ಬಾಲಾಜಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಕಲಂ ೩೭೬ (೨), (೧), ೩೭೬ (ಎ), ೩೭೬ (ಡಿ), ೩೦೨ ಹಾಗೂ ಪೋಕ್ಸೋ ಕಾಯ್ದೆಯಡಿ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
     ಉಳಿದ ಇಬ್ಬರು ಆರೋಪಿಗಳ ವಿಚಾರಣೆ ಬಾಲಾಪರಾಧ ನ್ಯಾಯಾಲಯದಲ್ಲಿಯಾಗಿದ್ದು, ಇವರಿಗೂ ಸಹ ಬಾಲಾಪರಾಧ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸಲಾಗಿದೆ.  ಕೊಪ್ಪಳದ ವಿಶೇಷ ಸಾರ್ವಜನಿಕ ಅಭಿಯೋಜಕ (ಪೋಕ್ಸೊ) ಸಿ.ಎಸ್. ಮುಟಗಿ ಅವರು ಅಭಿಯೋಜನದ ಪರವಾಗಿ ವಾದ ಮಂಡಿಸಿದ್ದರು.

Leave a Reply