ನ.೦೧ ರಂದು ರೈತರ ತರಬೇತಿ ನಿಲಯ ಮತ್ತು ಕಾರ್ಯಾಲಯ ಶಂಕು ಸ್ಥಾಪನೆ

  ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ತಾ.ಪಂ. ಆವರಣದಲ್ಲಿ ನ.೦೧ ರಂದು ಬೆಳಿಗ್ಗೆ ೧೧.೪೫ ಕ್ಕೆ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಕಾರ್ಯಾಲಯ ಹಾಗೂ ರೈತರ ತರಬೇತಿ ನಿಲಯದ ಶಂಕು ಸ್ಥಾಪನೆ ಸಮಾರಂಭ ಜರುಗಲಿದೆ.
ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸುವರು. ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು.  
ಸಂಸದ ಶಿವರಾಮಗೌಡ ಅವರು ಹಸ್ತ ಪ್ರತಿಗಳ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ಎಸ್.ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಹಾಲಪ್ಪ ಆಚಾರ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ ವಾಲ್ಮೀಕಿ, ತಾ.ಪಂ. ಅಧ್ಯಕ್ಷ ದೇವಪ್ಪ ಭರಮಪ್ಪ ಮೇಕಾಳಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ: ಪದ್ಮಯ ನಾಯಕ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ ಮುಂತಾದವರು ಭಾಗವಹಿಸುವರು.

Related posts

Leave a Comment