ನ. ೧೫ ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾದರ್ಶನ

ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಜನತಾ ದರ್ಶನ ಕಾರ್ಯಕ್ರಮವನ್ನು ನ. ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದಾರೆ.

  ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅರ್ಜಿ, ಅಹವಾಲುಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು   ತಿಳಿಸಿದ್ದಾರೆ.

Leave a Reply