You are here
Home > Koppal News > ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವೆ-ರಾಘವೇಂದ್ರ ಹಿಟ್ನಾಳ ಭರವಸೆ

ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವೆ-ರಾಘವೇಂದ್ರ ಹಿಟ್ನಾಳ ಭರವಸೆ

ಕೊಪ್ಪಳ. ಕ್ಷೇತ್ರದ ಮತದಾರ ಪ್ರಭುಗಳು ಈ ಭಾರಿಯ ಚುನಾವಣೆಯಲ್ಲಿ ತಮಗೆ ಆರ್ಶೀವದಿಸಿದಲ್ಲಿ ಕ್ಷೇತ್ರದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.
ಅವರು ಇತ್ತೀಚೆಗೆ ತಾಲೂಕಿನ ಹೊಸ ಗೊಂಡಬಾಳ ಹಾಗೂ ಬಹದ್ದೂರಬಂಡಿ ಗ್ರಾಮಗಳಲ್ಲಿ ಮತದಾರರ ಮನೆ-ಮನೆಗೆ ತೆರಳಿ ಮತಯಾಚಿಸುವ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರ ಹಾಗೂ ಮುಖಂಡರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದ ಜನತೆಯ ಅನುಕಂಪದ ಲಾಭ ಪಡೆದು ಅಧಿಕಾರಕ್ಕೆ ಬಂದ ಬಿಜೆಪಿ ಕಳೆದ ೫ ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದ ಪರಿಣಾಮ ಜನತೆ ಹಲವಾರು ಸಂಕಷ್ಟ ಹಾಗೂ ತೊಂದರೆಗಳನ್ನು ಎದುರಿಸಬೇಕಾಯಿತು. ಇದೀಗ ಮತ್ತೊಂದು ಚುನಾವಣೆ ಎದುರಾಗಿದ್ದು, ಈ ಚುನಾವಣೆಯಲ್ಲಿ ಸರ್ವರಿಗೂ ಸಮ ಬಾಳು-ಸಮ ಪಾಲು ಸಿದ್ದಾಂತಕ್ಕೆ ಬದ್ಧವಾಗಿರುವ ಹಾಗೂ ಸಾಮಾಜಿಕ ನ್ಯಾಯ, ಸಾಮಾಜಿಕ ಕಳಕಳಿಯನ್ನೂ ಹೊಂದಿರುವ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ತಮ್ಮನ್ನು ಈ ಚುನಾವಣೆಯಲ್ಲಿ ಚುನಾಯಿಸಿ ಕಳಿಸಿದಲ್ಲಿ ಕ್ಷೇತ್ರದ ಎಲ್ಲ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಹೊಸ ಗೊಂಡಬಾಳ ಹಾಗೂ ಬಹದ್ದೂರಬಂಡಿ ಗ್ರಾಮದ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. 
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸುರೇಶ ದೇಸಾಯಿ, ಶರಣಪ್ಪ ಸಜ್ಜನ್, ದ್ಯಾಮಣ್ಣ ಚಿಲವಾಡಗಿ, ಕಾಟನ್ ಪಾಷಾ, ಮಾನ್ವಿ ಪಾಷಾ, ಗೂಳಪ್ಪ ಹಲಿಗೇರಿ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ಮುತ್ತು ಕುಷ್ಟಗಿ, ಬಾಳಪ್ಪ ಬಾರಕೇರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Top