ರಾಜ್ಯಮಟ್ಟದ ಮಹಿಳಾ ಕ್ರೀಡಾಕೂಟ ಅ.೧೦ ರಂದು ತಂಡಗಳ ಆಯ್ಕೆ.

ಕೊಪ್ಪಳ, ಅ.೦೬ (ಕ ವಾ) ಪ್ರಸಕ್ತ ಸಾಲಿನ ರಾಜ್ಯಮಟ್ಟದ ರಾಜೀವ್‌ಗಾಂಧಿ ಖೇಲ್ ಅಭಿಯಾನ್ ಮಹಿಳಾ ಕ್ರೀಡಾಕೂಟದ ಗುಂಪು ೦೧ ಮತ್ತು ೦೨ ರ ಕ್ರೀಡಾಕೂಟವನ್ನು ಅ.೧೭ ರಿಂದ ೧೯ ರವರೆಗೆ ಚಿತ್ರದುರ್ಗದ ವೀರವನಿತೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಕೊಪ್ಪಳ ಜಿಲ್ಲಾ ತಂಡಗಳ ಆಯ್ಕೆ ಪ್ರಕ್ರಿಯೆಯು ಅ.೧೦ ರಂದು ಬೆಳಿಗ್ಗೆ ೧೦ ಗಂಟೆಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
     ಕ್ರೀಡಾಕೂಟದಲ್ಲಿ ಗುಂಪು ೦೧ ಮತ್ತು ೦೨ ರ ಕ್ರೀಡೆಗಳಾದ ಬಾಸ್ಕೆಟ್‌ಬಾಲ್, ಈಜು, ಹ್ಯಾಂಡ್‌ಬಾಲ್, ಹಾಕಿ, ಟೆನ್ನಿಸ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳಿಗೆ ಸ್ಪರ್ಧೆ ನಡೆಸಲಾಗುತ್ತಿದ್ದು, ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಮಹಿಳಾ ಕ್ರೀಡಾಪಟುಗಳು ತಮ್ಮ ಕ್ರೀಡಾ ಸಲಕರಣೆ ಮತ್ತು ಆಯಾ ಕ್ರೀಡಾಕೂಟಕ್ಕೆ ಸಂಬಂಧಿಸಿದ ಸಮವಸ್ತ್ರದೊಂದಿಗೆ ಅ.೧೦ ರಂದು ಬೆಳಿಗ್ಗೆ ೧೦ ಗಂಟೆಗೆ  ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇವರನ್ನು ಕಛೇರಿ ಸಮಯದಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೫೩೯-೨೦೧೪೦೦ ಅಥವಾ ತುಕಾರಾಂ ರಂಜಪಲ್ಲಿ, ಮೊ: ೭೮೯೯೪೩೨೨೨೭ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಾರದಾ ನಿಂಬರಗಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗಾಗಿ ವಿವಿಧ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.
ಕೊಪ್ಪಳ, ಅ.೦೬ (ಕ ವಾ)ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇವರ ವತಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಅ. ೧೨ ರವರೆಗೆ ವಿಸ್ತರಿಸಲಾಗಿದೆ.
     ವಿದ್ಯಾರ್ಥಿಗಳಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ೨೦೧೫-೨೦೧೬ ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವೃತ್ತಿಪರ ಕೋರ್ಸುಗಳ ವಿಶೇಷವಾಗಿ ಪಿ.ಜಿ.ಸಿ.ಇ.ಟಿ ಮೂಲಕ ಪ್ರವೇಶ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗಾಗಿ ಮಾತ್ರ ಅ.೧೨ ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ ಞಚಿಡಿeಠಿಚಿss.ಛಿgg.gov.iಟಿ ಮೂಲಕ ಸಲ್ಲಿಸಬಹುದಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಿಸಿಎಂ ಕಛೇರಿ, ಕೊಪ್ಪಳ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಲ್ಲೇಶ ತಿಳಿಸಿದ್ದಾರೆ.
Please follow and like us:
error