ನೂರು ದಿನ- ನೂರಾರು ನಿರ್ಣಯ : ಜಿಲ್ಲಾ ಉಸ್ತುವಾರಿ ಸಚಿವರಿಂದ ಕಿರುಹೊತ್ತಿಗೆ ಬಿಡುಗಡೆ

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ  ರಾಜ್ಯ ಸರ್ಕಾರಕ್ಕೆ  ನೂರು ದಿನಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೊರತಂದಿರುವ ನೂರು ದಿನ- ನೂರಾರು ನಿರ್ಣಯ ಕಿರುಹೊತ್ತಿಗೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಜಿ.ಪಂ. ಉಪಕಾರ್ಯದರ್ಶಿ ರವಿ ಬಿಸರಳ್ಳಿ, ವಾರ್ತಾ ಇಲಾಖೆಯ ಎಂ.ಅವಿನಾಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

Please follow and like us:

Related posts

Leave a Comment