ಸೆ.೨೦ ರಿಂದ ಜಿಲ್ಲಾ ಮಟ್ಟದ ದಸರಾ ಮತ್ತು ಮಹಿಳಾ ಕ್ರೀಡಾಕೂಟ

   ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಸೆ.೨೦ ರಂದು ಹಾಗೂ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಸೆ.೨೧ ಬೆಳಿಗ್ಗೆ ೯.೩೦ ಕ್ಕೆ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಏರ್ಪಡಿಸಲಾಗಿದೆ.
  ತಾಲ್ಲೂಕ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಅಥ್ಲೇಟಿಕ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಅಥ್ಲೇಟಿಕ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವೀತಿಯ ಸ್ಥಾನ ಪಡೆದವರು ಈ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. 
ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಅಥ್ಲೇಟಿಕ್, ಕಬ್ಬಡ್ಡಿ, ಖೋಖೋ, ಫುಟ್ಬಾಲ್, ವ್ಹಾಲಿಬಾಲ್, ಶೆಟಲ್ ಬ್ಯಾಡ್ಮಿಂಟನ್, ಹಾಕಿ, ಟೇಬಲ್ ಟೆನ್ನಿಸ್, ಹ್ಯಾಂಡ್‌ಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳಿರುತ್ತವೆ. ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳು ಸೆ.೨೦ ಹಾಗೂ ಸೆ.೨೧ ರಂದು ಬೆಳಿಗ್ಗೆ ೯.೦೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಿ ತಮ್ಮ ಹೆಸರುಗಳನ್ನು ಹಾಗೂ ಸ್ಪರ್ಧೆಗಳೊಂದಿಗೆ ನೋಂದಾಯಿಸಬಹುದಾಗಿದೆ. ವಿವಿಧ ತಾಲೂಕಿನಿಂದ ಬಂದ ಕ್ರೀಡಾ ಸ್ಪರ್ಧೆಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಹಾಗೂ ತಾಲೂಕಿನಿಂದ ಬಂದ ಕ್ರೀಡಾಪಟುಗಳಿಗೆ ಸಾಮಾನ್ಯ ಬಸ್ ದರದ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. 
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಕಛೇರಿ ದೂರವಾಣಿ ಸಂಖ್ಯೆ: ೦೮೫೩೯-೨೦೧೪೦೦, ಟಿ.ರಾಮಕೃಷ್ಣಯ್ಯ ಅಧೀಕ್ಷಕರು-೯೯೭೨೮೦೧೫೦೫ ಹಾಗೂ ಎ.ಎನ್.ಯತಿರಾಜ್ ಖೋಖೋ ತರಬೇತಿದಾರರು- ೯೪೪೮೬೩೩೧೪೬ ಇವರನ್ನು ಸಂಪರ್ಕಿಸಬಹುದಾಗಿದೆ.
Please follow and like us:
error