ಜು. ೨೭ ರಂದು ಆಧಾರ್ ಯೋಜನೆಗೆ ಕೊಪ್ಪಳದಲ್ಲಿ ಅಧಿಕೃತ ಚಾಲನೆ

ಕೊಪ್ಪಳ ಜು. : ಭಾರತೀಯ ನಿವಾಸಿಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ ನೀಡುವಂತಹ ಆಧಾರ್ ಯೋಜನೆಗೆ ಜಿಲ್ಲೆಯಲ್ಲಿ ಜು. ೨೭ ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಆಧಾರ್ ಯೋಜನೆಗೆ ಚಾಲನೆ ನೀಡುವ ಸಮಾರಂಭ ಜು. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಶಿವರಾಮಗೌಡ ಅವರು ನೆರವೇರಿಸುವರು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಡಾ: ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ತಂಗಡಗಿ, ಈಶಣ್ಣ ಗುಳಗಣ್ಣವರ್, ಹಾಲಪ್ಪ ಆಚಾರ್, ಶಶಿಲ್ ನಮೋಶಿ, ಮನೋಹರ ಮಸ್ಕಿ, ಹೆಚ್.ಸಿ. ನೀರಾವರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಡಾ. ಸೀತಾ ಗೂಳಪ್ಪ ಹಲಗೇರಿ, ತಾ.ಪಂ. ಅಧ್ಯಕ್ಷ ಅಮರೇಶ ಉಪಲಾಪುರ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್ ಸೇರಿದಂತೆ ಗಣ್ಯಾತಿಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.

Please follow and like us:
error