ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತ ನಾಗರಾಜ ಸುಣಗಾರ ಆಯ್ಕೆ

ಕೊಪ್ಪಳ ಜೂ.:ಜಿಲ್ಲಾ ಉದಯ ಟಿ.ವಿ ವರದಿಗಾರ ನಾಗರಾಜ ಸುಣಗಾರ ಅವರು ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಮೀಡಿಯಾ ಮತ್ತು ನ್ಯೂಸ್ ಸೆಂಟರ್ ಹಾಗೂ ಪತ್ರಕರ್ತರ ವೇದಿಕೆ ಬೆಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ಬಾರಿ ಕೂಡ ಜುಲೈ ೧ ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ನಾಡಿನ ಪ್ರತಿಭಾವಂತ ಪತ್ರಕರ್ತರಿಗೆ ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಅದರಂತೆ ಈ ಪ್ರಶಸ್ತಿಗೆ ಜಿಲ್ಲಾ ಉದಯ ಟಿ.ವಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ನಾಗರಾಜ ಸುಣಗಾರ ಹೂಗಾರ ಸ್ಮಾರಕ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Please follow and like us:
error