ಮೇ. ೨೭ ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿ

ಕೊಪ್ಪಳ ಮೇ. ೨೬ : ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಮೇ. ೨೭ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ೧೧ ಗಂಟೆಗೆ ಶಿಕಾರಿಪುರದಿಂದ ಹೆಲಿಕಾಪ್ಟರ್ ಮೂಲಕ ಹೊರಟು ೧೧-೪೫ ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ ೦೩ ಗಂಟೆಗೆ ಕೊಪ್ಪಳ ನಗರದ ಬಾಲಕಿಯರ ಪ.ಪೂ. ಕಾಲೇಜು ಮೈದಾನದಲ್ಲಿ ಆಸರೆ ಯೋಜನೆಯಡಿ ನಿರ್ಮಿಸಲಾಗಿರುವ ಮನೆಗಳ ಹಸ್ತಾಂತರ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ/ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು.
Please follow and like us:
error

Related posts

Leave a Comment