ನಿನ್ನೆ ನಾಮಪತ್ರಸಲ್ಲಿಕೆಗೆ ಕೊನೆಯ ದಿನ

ಕೊಪ್ಪಳ : ಗ್ರಾಮ ಪಂಚಾಯತಿಗೆ ನಡೆಯಲಿರುವ ಚುನಾವಣೆಗಳಿಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳು ಕ್ಯೂನಲ್ಲಿ ನಿಂತು ನಾಮಪತ್ರ ಸಲ್ಲಿಸಿದರು. ಜಿಲ್ಲೆಯ ಎಲ್ಲೆಡೆ ಬಿರುಸಿನ ಚಟುವಟಿಕೆಗಳು ಕಂಡು ಬರುತ್ತಿವೆ. ಎಲ್ಲ ರಾಜಕೀ ಯ ಪಕ್ಷಗಳ ಮುಖಂಡರು ತಮ್ಮ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಬೆಂಬಲ ನೀಡುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಪಕ್ಷ ಬಲಪಡಿಸಲು ಇದೊಂದು ಎಲ್ಲ ಪಕ್ಷಗಳಿಗೆ ಒಳ್ಳೆಯ ಅವಕಾಶವಾಗಿದೆ. ಇದರಿಂದಾಗಿ ಎಲ್ಲ ಪಕ್ಷಗಳು ತಮ್ಮ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇತ್ತೀಚೆ ಗ್ರಾಮ ಪಂಚಾಯತ್ ಗಳಿಗೆ ಹರಿದು ಬರುತ್ತಿರುವ ಅನುದಾನವನ್ನು ನೋಡಿದರೆ ತಾಲೂಕ ಪಂಚಾಯತ್ ಸದಸ್ಯರಿಗಿಂತಲೂ ಲಾಭದಾಯಕ ಈ ಸದಸ್ಯತ್ವ ಎನ್ನುತ್ತಾರೆ. ಜಿಲ್ಲೆಯಲ್ಲಿ ಒಟ್ಟು 130 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯುತ್ತಿದ್ದು ಒಟ್ಟು 2517 ಸದಸ್ಯರ ಆಯ್ಕೆ ನಡೆಯಲಿದೆ. 675353 ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಚುನಾವಣೆಗೆ ಸರ್ವ ಸಿದ್ದತೆಗಳು ನಡೆದಿದ್ದು ಜಿಲ್ಲಾಡಳಿತ ಸೂಕ್ತ ಬಂದೋಬಸ್ತಿಗಾಗಿ ಕ್ರಮಕೈಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Leave a Reply