ನ. ೨೫ ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

  ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಹಿಂಗಾರು ಹಂಗಾಮಿನ ೧೦೦ನೇ ಸಭೆ ನ. ೨೫ ರಂದು ಮದ್ಯಾಹ್ನ ೩.೦೦ ಗಂಟೆಗೆ, ಮುನಿರಾಬಾದಿನ ಕಾಡಾ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ  ಪಿ.ಟಿ. ಪರಮೇಶ್ವರ ನಾಯ್ಕ ಅವರು ವಹಿಸುವರು.  ಸಭೆಯಲ್ಲಿ ೨೦೧೪-೧೫ ನೇ ಸಾಲಿನ ಹಿಂಗಾರು ಹಂಗಾಮಿಗೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ವಿವಿಧ ಕಾಲುವೆಗಳಿಗೆ ನೀರು ಒದಗಿಸುವ ಬಗ್ಗೆ ಮತ್ತು ಅಧಿಸೂಚನೆ ಹೊರಡಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಭೋಜಾನಾಯ್ಕ ಕಟ್ಟಿಮನಿ ಅವರು ತಿಳಿಸಿದ್ದಾರೆ.

Related posts

Leave a Comment