ಕೆಜೆಪಿ ಪಕ್ಷದ ಅಭ್ಯರ್ಥಿ ಕೆ.ಎಂ.ಸಯ್ಯದ್‌ರಿಂದ ಮಿಂಚಿನ ಪ್ರಚಾರ

ಕೊಪ್ಪಳ,ಏ.೧೨: ಬರುವ ಮೇ.೦೫ ರಂದು ಜರುಗಲಿರುವ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲಿರುವ ಕೆಜೆಪಿ ಪಕ್ಷದ ಅಭ್ಯರ್ಥಿ ಕೆ.ಎಂ.ಸಯ್ಯದ್‌ರವರು ಶುಕ್ರವಾರ ಕೊಪ್ಪಳ ನಗರದ ವಿವಿಧ ಓಣಿಗಳಿಗೆ ಮತ್ತು ಹಲಗೇರಿ, ಒದಗನಾಳ, ಅಳವಂಡಿ, ಹೊಸಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ಮಾಡಿ ಸಂಚಾರ ನಡೆಸಿ ಮಿಂಚಿನ ಮತಯಾಚನೆ ನಡೆಸಿದರು.
ನಗರದ ಪ್ರಮುಖ ಓಣಿಗಳಿಗೆ ಹಾಗೂ ಗ್ರಾಮಗಳಿಗೆ ಭೇಟಿ ಮಾಡಿ ವಿವಿಧ ಸಂಘಟನೆಗಳ ಅಧ್ಯಕ್ಷ, ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೆಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಜನರ ಮನೆಬಾಗಿಲಿಗೆ ಪ್ರತಿನಿಧಿಗಳ ಸೇವೆ ಹಾಗೂ ಸರ್ಕಾರದ ಕಾರ್ಯಕ್ರಮಗಳು ತಲುಪಿಸಲು ಕೆಜೆಪಿ ಪಕ್ಷಕ್ಕೆ ಬೆಂಬಲಿಸಬೇಕೆಂದು ಅಭ್ಯರ್ಥಿ ಕೆ.ಎಂ.ಸಯ್ಯದ್‌ರವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಪ್ಪಳ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಯ್ಯದ್ ಫೌಂಡೇಶನ್ ವತಿಯಿಂದ ಈಗಾಗಲೇ ಸಾಮಾಜಿಕ ಸೇವೆ ಮಾಡುವುದರ ಮೂಲಕ ಜನರ ಸಮಸ್ಯೆ ಮತ್ತು ನೋವು ನಲಿವುಗಳಿಗೆ ನೇರ ಸ್ಪಂದನೆ ನೀಡುವುದರ ಮೂಲಕ ಜನರ ಆಶೋತ್ತರಗಳ ಈಡೇರಿಕೆಗಾಗಿ ಅವರೊಂದಿಗೆ ಬೇರೆತು ನಿರಂತರ ಹೋರಾಟ ಮಾಡುತ್ತ ಬಂದಿದ್ದು, ಈ ಚುನಾವಣೆಯಲ್ಲಿ ಜನರಿಂದ ವ್ಯಾಪಕವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಇದು ಒಳ್ಳೆಯ ಬೆಳವಣಿಯಾಗಿದೆ ಎಂದ ಅವರು, ಈ ಚುನಾವಣೆಯಲ್ಲಿ ಕೆಜೆಪಿ ಪಕ್ಷಕ್ಕೆ ಬೆಂಬಲಿಸಬೇಕೆಂದು ಕೆ.ಎಂ.ಸಯ್ಯದ್ ಮನವಿ ಮಾಡಿಕೊಂಡರು. 
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮಹೆಬೂಬ ಮುಲ್ಲಾ, ಶ್ಯಾಮೀದ್ ಕಿಲ್ಲೇದಾರ, ನೇಮಿರಾಜ ಪಾಟೀಲ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಮುಸ್ಲಿಂ ಸಮಾಜದ ಸಾರ್ವಜನಿಕರು ಯುವಕ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

Leave a Reply