ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

  ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಕೊಪ್ಪಳ ತಾಲೂಕಿನಲ್ಲಿರುವ ಮೆಟ್ರಿಕ್ ನಂತರದ ವಿವಿಧ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಳಗಳಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 
ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕೊಪ್ಪಳ-01, ಕೊಪ್ಪಳ-02, ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯ ಕೊಪ್ಪಳ-01, ಕೊಪ್ಪಳ-03, ವೃತ್ತಿಪರ ಮೆಟ್ರಿಕ್ ನಂತರದ ವಸತಿ ನಿಲಯ ಬಂಡಿಹರ್ಲಾಪುರ ಈ ನಿಲಯಗಳಿಗೆ ಪರಿಶಿಷ್ಟ ಜಾತಿಗೆ ಮೀಸಲಿಡಲಾಗಿದೆ, ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯ ಕೊಪ್ಪಳ ಹಾಗೂ ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯ ಕೊಪ್ಪಳ-02 ಈ ನಿಲಯಗಳಿಗೆ ಪರಿಶಿಷ್ಟ ವರ್ಗಕ್ಕೆ ಮೀಸಲಿಡಲಾಗಿದೆ. 
ವಿದ್ಯಾರ್ಥಿ ನಿಲಯಗಳಲ್ಲಿ ಆಯ್ಕೆ ಕೋರಿ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳ ಆಯ್ಕೆ ಸಮಿತಿಯಲ್ಲಿ ಶೇ.75:25% ರ ಅನುಪಾತದಲ್ಲಿ ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿಪಡಿಸಿದ ದಾಖಲೆಗಳೊಂದಿಗೆ ಜೂ-30 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ದೂರವಾಣಿ ಸಂಖ್ಯೆ: 08539-220599 ಇವರನ್ನು ಸಂಪರ್ಕಿಸಬಹುದಾಗಿದೆ.

Leave a Reply