ಭಗವದ್ಗೀತೆ ಅಭಿಯಾನ : ಶಿಕ್ಷಣ ಸಚಿವರ ಪ್ರತಿಕೃತಿ ದಹನ

ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಭೋಧನೆಯನ್ನು ವಿರೋಧಿಸುತ್ತಿರುವವರು ದೇಶ ಬಿಟ್ಟು ತೊಲಗಲಿ ಎಂದು ಹೇಳಿಕೆ ನೀಡಿರುವ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಎಸ್ ಎಫ್ ಐ ಸಂಘಟನೆ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿತು.
ಸಚಿವರ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್ ಎಫ್ ಐನ ಗುರುರಾಜ ದೇಸಾಯಿ, ಬಾಳಪ್ಪ ಹುಲಿಹೈದರ್, ಸುಭಾನ್ ಸೈಯದ್ ಮಾತನಾಡಿ ಅಭಿಯಾನವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು

Please follow and like us:
error