fbpx

ಗದಗ-ವಾಡಿ ನೂತನ ರೈಲ್ವೆ ಮಾರ್ಗ ಶಂಕುಸ್ಥಾಪನೆ ಸಮಾರಂಭ

 ಕರ್ನಾಟಕ ಸರ್ಕಾರ ಮತ್ತು ನೈರುತ್ಯ ರೈಲ್ವೆ ಇವರ ಸಹಯೋಗದೊಂದಿಗೆ ಗದಗ-ವಾಡಿ ನೂತನ ರೈಲು ಮಾರ್ಗದ ಶಂಕುಸ್ಥಾಪನೆ ಸಮಾರಂಭ ಫೆ. ೨೮ ರಂದು ಮಧ್ಯಾಹ್ನ ೨-೩೦ ಗಂಟೆಗೆ ಯಲಬುರ್ಗಾದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.
  ಕೇಂದ್ರ ರೈಲ್ವೆ ಸಚಿವರು ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಗದಗ-ವಾಡಿ ನೂತನ ರೈಲು ಮಾರ್ಗದ ಶಂಕುಸ್ಥಾಪನೆ ನೆರವೇರಿಸುವರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಮೂಲ ಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಹಜ್ ಸಚಿವ ರೋಷನ್ ಬೇಗ್, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಎಚ್.ಕೆ. ಪಾಟೀಲ್, ಕೊಪ್ಪಳ ಸಂಸದ ಶಿವರಾಮಗೌಡ, ಹಾವೇರಿ ಸಂಸದ ಶಿವಕುಮಾರ ಉದಾಸಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ರಾಘವೇಂದ್ರ ಹಿಟ್ನಾಳ್, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ, ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ, ತಾ.ಪಂ. ಅಧ್ಯಕ್ಷೆ ನಿರ್ಮಲ ಉಮೇಶ್ ಕಪಾಲಿ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಭಾಗೀರಥಿ ಎಂ. ಜೋಗಿನ್ ಅತಿಥಿಗಳಾಗಿ ಭಾಗವಹಿಸುವರು ಎಂದು ನೈರುತ್ಯ ರೈಲ್ವೆ (ನಿರ್ಮಾಣ) ವಿಭಾಗದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!