ನಕಲಿ ರಕ್ಷಣಾ ಲಂಚ ಹಗರಣ: ಬಿಜೆಪಿ ಮಾಜಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ತಪ್ಪಿತಸ್ಥ

ನವದೆಹಲಿ (ಪಿಟಿ‌ಐ):ಖೋಟಾ ರಕ್ಷಣಾ ಹಗರಣವೊಂದಕ್ಕೆ ಸಂಬಂಧಿಸಿದಂತೆ 2001ರಲ್ಲಿ ಒಂದು ಲಕ್ಷ ರೂಪಾಯಿ ಲಂಚ ಪಡೆದ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಅಧ್ಯಕ್ಷ ಬಂಗಾರು ಲಕ್ಷ್ಮಣ್ ಅವರು ತಪ್ಪಿತಸ್ಥ ಎಂದು ದೆಹಲಿಯ ನ್ಯಾಯಾಲಯವೊಂದು ಶುಕ್ರವಾರ ತೀರ್ಪು ನೀಡಿದೆ.
ನ್ಯಾಯಾಲಯದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬಂಗಾರು ಲಕ್ಷ್ಮಣ್ ಅವರನ್ನು ನ್ಯಾಯಾಂಗ ವಶಕ್ಕೆ ಪಡೆದುಕೊಳ್ಳಲಾಗಿದೆ.ಅವರನ್ನು ಶನಿವಾರ ಬೆಳಗ್ಗೆ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು.ಈ ಸಂದರ್ಭದಲ್ಲಿ ನ್ಯಾಯಾಲಯವು ಶಿಕ್ಷೆಯ ಸ್ವರೂಪವನ್ನು ಪ್ರಕಟಿಸಲಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
Please follow and like us:
error