ಬಸವರಾಜ ಪೂಜಾರವರಿಗೆ ಪಿಎಚ್.ಡಿ ಪದವಿ

ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿರುವ   ಬಸವರಾಜ ಪೂಜಾರ ರವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. ಕೊಪ್ಪಳ ಜಿಲ್ಲೆಯ ಕೋಮು ಸೌಹಾರ್ದತೆ ತಾಣಗಳು ಎಂಬ ವಿಷಯದ ಮೇಲೆ ಮಹಾಪ್ರಬಂಧವನ್ನು ಪ್ರಾಧ್ಯಾಪಕರಾದ ಡಾ.ಹೆಬ್ಬಾಲೆ ಕೆ. ನಾಗೇಶ ಅವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರು. ಪಿಎಚ್.ಡಿ ಪದವಿ ಪಡೆದ ಶ್ರೀ ಬಸವರಾಜ ಪೂಜಾರ ರವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಮತ್ತು ಸಕಲ ವಿದ್ಯಾರ್ಥಿ ಬಳಗ ಅಭಿನಂದಿಸಿದೆ.
Please follow and like us:
error