ಏ. ೨೮ ರಂದು ಗಂಗಾವತಿಯಲ್ಲಿ ಶಬ್ದಮಾಲಿನ್ಯ ಜಾಗೃತಿ ದಿನಾಚರಣೆ


ಕೊಪ್ಪಳ ಏ. ೨೭ : ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಂಗಾವತಿಯ ಸ್ಥಳೀಯ ಸಂಘಟನೆಗಳ ಸಹಯೋಗದಲ್ಲಿ ಅಂತರ್ ರಾಷ್ಟ್ರೀಯ ಶಬ್ದ ಮಾಲಿನ್ಯ ಜಾಗೃತಿ ದಿನಾಚರಣೆ ಕಾರ್ಯಕ್ರಮ ಏ. ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಗಂಗಾವತಿಯ ಮಂಥನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ನಗರದಲ್ಲಿನ ಶಬ್ದ ಮಾಲಿನ್ಯವು ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತಿದೆ. ಇದು ಆರೋಗ್ಯದ ಸಮಸ್ಯೆಗಳಾದ ರಕ್ತದೊತ್ತಡ, ಕಿವುಡುತನ, ನಿದ್ರಾಹೀನತೆ ಮತ್ತಿತರ ಸಮಸ್ಯೆಗಳು ಉಂಟಾಗಲು ಪ್ರಮುಖ ಕಾರಣಗಳಲ್ಲೊಂದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಶಬ್ದ ಮಾಲಿನ್ಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷದ ಏಪ್ರಿಲ್ ಮಾಹೆಯ ನಾಲ್ಕನೆ ಬುಧವಾರದಂದು ಅಂತರ್ ರಾಷ್ಟ್ರೀಯ ಶಬ್ಧ ಮಾಲಿನ್ಯ ಜಾಗೃತಿ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

Leave a Reply