ಸಂಸದ ಸಂಗಣ್ಣ ಕರಡಿ ಅವರಿಂದ ರಾಜ್ಯಪಾಲರ ಭೇಟಿ : ಮನವಿ

ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ರಾಜ್ಯಪಾಲರಾದ ವಜುಭಾಯಿ ರುಡಾಭಾಯಿ ವಾಲಾ ಅವರನ್ನು ಇತ್ತೀಚೆಗೆ ಭೇಟಿಯಾಗಿ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಂಡರು.

  ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿರುವ ಸಂಸದ ಸಂಗಣ್ಣ ಕರಡಿ ಅವರು, ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿ ಅತ್ಯಂತ ಹಿಂದುಳಿದಿರುವ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS)  ಮಂಜೂರು ಮಾಡುವುದು.  ಪಶು ವೈದ್ಯಕೀಯ ಕಾಲೇಜು ಮಂಜೂರು.  ಸ್ನಾತಕೋತ್ತರ ಕೇಂದ್ರ ಮಂಜೂರು ಮಾಡುವುದು.  ಕೃಷಿ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ಮಂಜೂರು ಮಾಡಲು ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿಕೊಂಡರು.  ಅಲ್ಲದೆ ಈಗಾಗಲೆ ಗಂಗಾವತಿಗೆ ಮಂಜೂರಾಗಿರುವ ಕೃಷಿ ಕಾಲೇಜು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಸಂಗಣ್ಣ ಕರಡಿ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ .
Please follow and like us:

Leave a Reply