fbpx

ಮಾ. ೦೧ ರಿಂದ ಕೊಪ್ಪಳದಲ್ಲಿ ವಿಭಾಗ ಮಟ್ಟದ ಯುವಜನ ಮೇಳ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸ್ವರಭಾರತಿ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆ, ಬ್ಲ್ಯೂಸ್ಟಾರ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜಿಲ್ಲೆಯ ಎಲ್ಲಾ ಯುವ ಸಂಘಗಳ ಸಂಯುಕ್ತಾಶ್ರಯದಲ್ಲಿ ಗುಲಬರ್ಗಾ ವಿಭಾಗ ಮಟ್ಟದ ಯುವಜನ ಮೇಳ ಮಾ. ೦೧ ರಿಂದ ೦೨ ರವರೆಗೆ ಕೊಪ್ಪಳದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಒಳಾಂಗಣ ಆವರಣದಲ್ಲಿ ನಡೆಯಲಿದೆ.
  ವಿಭಾಗ ಮಟ್ಟದ ಯುವಜನ ಮೇಳದ ಉದ್ಘಾಟನೆ ಕಾರ್ಯಕ್ರಮ ಮಾ. ೦೧ ರಂದು ಸಂಜೆ ೪-೩೦ ಗಂಟೆಗೆ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ. ಅಧ್ಯಕ್ಷ ಮುದೇಗೌಡ ಮಾಲಿಪಾಟೀಲ್, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ವಿನಯಕುಮಾರ ಮೇಲಿನಮನಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ತೋಟದ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಇಲಾಖೆ ಕಾರ್ಯದರ್ಶಿ ಬಸವರಾಜು, ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.  ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾವಗೀತೆ, ಏಕಪಾತ್ರಾಭಿನಯ, ರಂಗಗೀತೆ, ಲಾವಣಿ, ಗೀಗೀ ಪದ, ಕೋಲಾಟ, ಭಜನೆ, ಜನಪದ ಗೀತೆ, ಜನಪದ ನೃತ್ಯ, ವೀರಗಾಸೆ, ಸೋಬಾನ ಪದ, ಡೊಳ್ಳು ಕುಣಿತ, ಬೀಸುವ ಕಲ್ಲಿನ ಪದ, ಚರ್ಮವಾದ್ಯ ಮೇಳ, ದೊಡ್ಡಾಟ, ಸಣ್ಣಾಟ ಮುಂತಾದ ಪ್ರಕಾರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೈ. ಸುದರ್ಶನರಾವ್  ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!