ಪಿಯುಸಿ ಜೀವಶಾಸ್ತ್ರ ಪರೀಕ್ಷೆ : ೮೧೯ ವಿದ್ಯಾರ್ಥಿಗಳು ಹಾಜರು

ಕೊಪ್ಪಳ ಮಾ. ೨೪  : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳವಾರದಂದು ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಜೀವಶಾಸ್ತ್ರ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೮೧೯ ವಿದ್ಯಾರ್ಥಿಗಳು ಹಾಜರಾಗಿದ್ದು, ೪೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
  ಪಿಯುಸಿ ಪರೀಕ್ಷೆಯ ಜೀವಶಾಸ್ತ್ರ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೮೬೩ ವಿದ್ಯಾರ್ಥಿಗಳ ಪೈಕಿ ೮೧೯ ವಿದ್ಯಾರ್ಥಿಗಳು ಹಾಜರಾಗಿದ್ದು, ೪೪ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಕೊಪ್ಪಳ ತಾಲೂಕಿನಲ್ಲಿ ೩೯೨ ವಿದ್ಯಾರ್ಥಿಗಳ ಪೈಕಿ ೩೭೪ ವಿದ್ಯಾರ್ಥಿಗಳು ಹಾಜರಾಗಿದ್ದು, ೧೮ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಗಂಗಾವತಿ ತಾಲೂಕಿನಲ್ಲಿ ೧೧೫ ವಿದ್ಯಾರ್ಥಿಗಳ ಪೈಕಿ ೧೧೩ ವಿದ್ಯಾರ್ಥಿಗಳು ಹಾಜರಿದ್ದು, ೦೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೨೪ ವಿದ್ಯಾರ್ಥಿಗಳ ಪೈಕಿ ೧೮ ಹಾಜರಿದ್ದು, ೦೬ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೯೯ ವಿದ್ಯಾರ್ಥಿಗಳ ಪೈಕಿ ೮೯ ವಿದ್ಯಾರ್ಥಿಗಳು ಹಾಜರಾಗಿದ್ದು, ೧೦ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ ತಿಳಿಸಿದ್ದಾರೆ.
Please follow and like us:

Leave a Reply