ರಾಜ್ಯ ಮಟ್ಟಕ್ಕೆ ಆಯ್ಕೆ: ಹರ್ಷ ಅಭಿನಂದನೆ

ಕೊಪ್ಪಳ: ನಗರದ ಕಾಳಿದಾಸ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯ ಪ್ರೌಢ ಶಾಲಾ ವಿಭಾಗದ ವಿಜ್ಞಾನ ರಸಪ್ರಶ್ನೆಯಲ್ಲಿ ಕುಣಿಕೇರಿ ಶಾಲೆಯ ಶಿಕ್ಷಕರಾದ ನಾಗರಾಜ ಪರಡೇಕರ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

  ಆಯ್ಕೆ ಹರ್ಷ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಜ್ಞಾನ ರಸಪ್ರಶ್ನೆಯ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಣಿಕೇರಿ ಶಾಲೆಯ ಶಿಕ್ಷಕರಾದ ನಾಗರಾಜ ಪರಡೇಕರವರಿಗೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ,ಕೊಪ್ಪಳ ತಾಲೂಕ ಅಧ್ಯಕ್ಷರಾದ ಅಂದಪ್ಪ ಬೋಳರೆಡ್ಡಿ ಹರ್ಷ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Leave a Reply