ರಾಷ್ಟ್ರೀಯ ಕೋಮು ಸೌಹಾರ್ದತಾ ಸಪ್ತಾಹ

    ಕೊಪ್ಪಳ ನಗರದ ಬನ್ನಿಕಟ್ಟಿ ಹತ್ತಿರದ ವಿಜಯನಗರ ಪ್ರೌಢಶಾಲೆಯಲ್ಲಿ ನೇಹರು ಯುವ ಕೇಂದ್ರ, ಕೊಪ್ಪಳ ಯುವ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ, ಸಂಸ್ಥೆ, ಕೊಪ್ಪಳ ವಂದೇ ಮಾತರಂ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೋಮು ಸೌಹಾರ್ದತಾ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಮರಜ್ಯೋತಿ ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಶರಣಪ್ಪನವರು ಮಾಡಿ, ಕೋಮು ಸೌಹಾರ್ದತೆ ಮತ್ತು ರಾಷ್ಟ್ರೀಯ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ವೀರ ಕನ್ನಡಿಗ ಯುವಕ ಸಂಘದ ಅಧ್ಯಕ್ಷರಾದ ಶಿವಾನಂದ ಹುದ್ಲೂರ, ವಂದೇ ಮಾತರಂ ಸೇವಾ ಸಂಘದ ಸಂಸ್ಥಾಪಕರಾದ ರಾಕೇಶ ಕಾಂಬ್ಳೇಕರ್, ಯುವ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಆನಂದ ಹಳ್ಳಿಗುಡಿ, ಕಾರ್ಗಿಲ್ ಮಲ್ಲಯ್ಯ ಅಂಗವಿಕಲ ಸಂಘದ ಸಿದ್ದಲಿಂಗಯ್ಯ ಹಿರೇಮಠ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶೀಲಾ ವಹಿಸಿದ್ದರು, ಸ್ವಾಗತ ಮತ್ತು ನಿರೂಪಣೆಯನ್ನು ಶಾಲೆಯ ಶಿಕ್ಷಕರಾದ ಭೀಮಪ್ಪ ನಿರ್ವಹಿಸಿದರು.
Please follow and like us:
error