ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ- ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಕರೆ.

ಕೊಪ್ಪಳ ಅ. ೧೯ (ಕ ವಾ) ಕೊಪ್ಪಳ ಜಿಲ್ಲೆಯಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದು, ಅಂತಹ ಕ್ರೀಡಾಪಟುಗಳನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ಕರೆ ನೀಡಿದರು.
     ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ರಾಜೀವ ಗಾಂಧಿ ಖೇಲ್ ಅಭಿಯಾನ್ ಗ್ರಾಮೀಣ ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
    ಕೊಪ್ಪಳ ಜಿಲ್ಲೆಯಲ್ಲಿ ಅದರಲ್ಲೂ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭಾನ್ವಿತ
     ಮಂಜುನಾಥ ಗೊಂಡಬಾಳ ಕಾರ್ಯಕ್ರಮ ಕುರಿತು ಮಾತನಾಡಿದರು.  ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ಶಾರದಾ ನಿಂಬರಗಿ ಪ್ರಾಸ್ತಾವಿಕ ಮಾತನಾಡಿದರು.
     ಕಾರ್ಯಕ್ರಮದಲ್ಲಿ ಕ್ರೀಡಾ ತರಬೇತುದಾರರಾದ ವಿಠ್ಠಲ್ ಬೈಲವಾಡಿಗ, ಎಂ.ಎಸ್.ಪಾಟೀಲ್, ಯತಿರಾಜ್, ಕರಿಬಸಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ರೀಡಾಪಟುಗಳಿದ್ದು, ಅಂತಹ ಕ್ರೀಡಾಪಟುಗಳನ್ನು ಗುರುತಿಸಿ, ಅವರಿಗೆ ಉತ್ತಮ ಪ್ರೋತ್ಸಾಹ ನೀಡಿದಲ್ಲಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲೂ ಜಿಲ್ಲೆಯ ಪ್ರತಿಭೆಗಳು ಮಿಂಚಲು ಸಾಧ್ಯವಾಗಲಿದೆ.  ನಗರದ ಜಿಲ್ಲಾ ಕ್ರೀಡಾಂಗಣ ಇನ್ನಷ್ಟು ಅಭಿವೃದ್ಧಿಯಾಗಬೆಕಿದ್ದು, ಇದಕ್ಕೆ ಜಿಲ್ಲಾ ಪಂಚಾಯಿತಿಯ ವಿವಿಧ ಯೋಜನೆಯಡಿ ಅನುದಾನ ಒದಗಿಸಲಾಗುವುದು.  ಗುಣಮಟ್ಟದ ಆಟದ ಮೈದಾನ, ವಸತಿ ಗೃಹ ಹಾಗೂ ಕ್ರೀಡಾಪಟುಗಳಿಗೆ ಶೌಚಾಲಯ, ಸ್ನಾನಗೃಹ ಸೇರಿದಂತೆ ಕಂಪೌಂಡ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬೇಕಿರುವ ಕುರಿತು ಕ್ರೀಡಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಪಂನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು.  ಪೈಕಾ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ ರಾಜ್ಯ ಮಟ್ಟದಲ್ಲಿ ಜಿಲ್ಲೆಯಿಂದ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಜಿಪಂನಿಂದ (ಟ್ರಾಕ್ ಶೂಟ್) ಸಮವಸ್ತ್ರ ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ, ಕಲೆ ಪ್ರದರ್ಶನ ಮಾಡಬೇಕು. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳಸಿಕೊಳ್ಳಬೇಕು. ಇಲ್ಲಿಯ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ಆಶಿಸಿದರು.

Leave a Reply