೭೮ ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ : ಜು. ೯ ರಂದು ಲಾಂಛನ ಅನಾವರಣ

ಕೊಪ್ಪಳ ಜು. : ೭೮ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಗಂಗಾವತಿಯಲ್ಲಿ ಆಚರಿಸಲಾಗುತ್ತಿದ್ದು, ಸಮ್ಮೇಳನ ಕುರಿತಂತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರ ಪ್ರಸಾದ್ ಅವರು ಜು. ೯ ರಂದು ಗಂಗಾವತಿಯಲ್ಲಿ ಲಾಂಛನ ಅನಾವರಣಗೊಳಿಸಲಿದ್ದಾರೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅವರು ತಿಳಿಸಿದ್ದಾರೆ.
ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ೨೦೧೧ ರ ನವೆಂಬರ್ ಮೂರನೆ ವಾರದಲ್ಲಿ ಗಂಗಾವತಿಯ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ ಜರುಗಿಸಲು ತೀರ್ಮಾನಿಸಲಾಗಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಕಚೇರಿಯನ್ನು ಪ್ರಾರಂಭಿಸಲು ಸ್ಥಳ ನಿಗದಿಪಡಿಸಲಾಗಿದ್ದು, ಗಂಗಾವತಿ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿರುವ ಮಾರಾಟ ಮಳಿಗೆ (ಟೆಂಡರ್ ಹಾಲ್) ಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರ ಪ್ರಸಾದ್ ಅವರು ಜು. ೯ ರಂದು ಬೆಳಿಗ್ಗೆ ೧೦ ಗಂಟೆಗೆ ಸ್ವಾಗತ ಸಮಿತಿಯ ಕಚೇರಿಗೆ ಚಾಲನೆ ನೀಡುವರು. ನಂತರ ಬೆಳಿಗ್ಗೆ ೧೦-೩೦ ಗಂಟೆಗೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ದಿನಾಂಕವನ್ನು ಪ್ರಕಟಿಸಲಾಗುವುದಲ್ಲದೆ, ಸಮ್ಮೇಳನದ ಲಾಂಛನವನ್ನು ಕೂಡ ಅನಾವರಣಗೊಳಿಸಲಿದ್ದಾರೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅವರು ತಿಳಿಸಿದ್ದಾರೆ.
Please follow and like us:
error