ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಬ್ಬಿಣಾಂಶ ಮಾತ್ರೆ ನೀಡುವ ಆಂದೋಲನಕ್ಕೆ ಚಾಲನೆ

  ಜಿಲ್ಲೆಯ ಹದಿಹರೆಯದ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿನ ಪೌಷ್ಠಿಕಾಂಶ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹದಿಹರೆಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಕೊಪ್ಪಳ ತಾಲೂಕ ಪಂಚಾಯತಿ ಅಧ್ಯಕ್ಷ ದೇವಪ್ಪ ಮೇಕಾಳಿ ಅವರು ಬುಧವಾರ ಕೊಪ್ಪಳದಲ್ಲಿ ಚಾಲನೆ ನೀಡಿದರು.
  ಕೊಪ್ಪಳದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಹದಿಹರೆಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸುವ ಯೋಜನೆಗೆ ಚಾಲನೆ ನೀಡಲಾಯಿತು.
  ಕಬ್ಬಿಣಾಂಶದ ಕೊರತೆ ಅನಿಮಿಯಾದಿಂದ ಬಳಲುತ್ತಿರುವ ೧೦ ರಿಂದ ೧೯ ವರ್ಷದ ವಯೋಮಾನದೊಳಗಿನ ಹದಿಹರೆಯದವರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಸಾಪ್ತಾಹಿಕ ಕಬ್ಬಿಣಾಂಶ ಮತ್ತು ಫೋಲಿಕ್ ಆಸಿಡ್ ಸಪ್ಲಿಮೆಂಟೇಶನ್ ಕಾರ್ಯಕ್ರಮ ಪ್ರಾರಂಭಗೊಂಡಿದ್ದು, ಕಬ್ಬಿಣಾಂಶದ ಕೊರತೆಯ ಅನಿಮಿಯಾದಿಂದ ಯಾವುದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸದಂತೆ ಮಾಡಲು ಈ ಆಂದೋಲನ ಹಮ್ಮಿಕೊಳ್ಳಲಾಗಿದೆ.  ಈ ಕಾರ್ಯಕ್ರಮದಡಿ ಜಿಲ್ಲೆಯಲ್ಲಿನ ಎಲ್ಲ ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನಿಯಮಿತವಾಗಿ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸಲಾಗುವುದು.  ಅಲ್ಲದೆ ಪ್ರತಿ ಆರು ತಿಂಗಳಿಗೊಮ್ಮೆ ಜಂತುನಿವಾರಕ ಮಾತ್ರೆಗಳನ್ನು ಸಹ ವಿತರಿಸುವ ಯೋಜನೆಯಿದೆ.  ಪ್ರಭಾರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಡಿಡಿಪಿಐ ಜಿ.ಹೆಚ್. ವೀರಣ್ಣ, ಕ್ಷೇತ್ರ ಶಿಕ್ಷಣಾಧಿಕಾಋಇ ಬಸವರಾಜಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹದೇವಸ್ವಾಮಿ, ಜಿಲ್ಲಾ ಅಕ್ಷರದಾಸೋಹ ಅಧಿಕಾರಿ ದೊಡ್ಡಬಸಪ್ಪ ನೀರಲಕೇರಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೈ. ಸುದರ್ಶನರಾವ್ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

Leave a Reply