ಈಶಾನ್ಯ ಪದವೀಧರರ ಮತಕ್ಷೇತ್ರ : ಮತದಾರರ ಪಟ್ಟಿ ಲಭ್ಯ

  ಕರ್ನಾಟಕ ವಿಧಾನಪರಿಷತ್ತಿಗೆ ಈಶಾನ್ಯ ಪದವೀಧರರ ಮತಕ್ಷೇತ್ರದಿಂದ ಜೂ. ೧೦ ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಗುಲಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೆ. ರತ್ನಪ್ರಭ ಅವರು ತಿಳಿಸಿದ್ದಾರೆ.
  ಈಶಾನ್ಯ ಪದವೀಧರರ ಮತಕ್ಷೇತ್ರದಿಂದ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ತಮ್ಮ ಹೆಸರು, ಕ್ರಮಸಂಖ್ಯೆ ಇತ್ಯಾದಿ ವಿವರಗಳನ್ನು ಪರಿಶೀಲಿಸಲು ಅನುಕೂಲವಾಗುವಂತೆ ಮತದಾರರ ಯಾದಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲಾ ತಹಸಿಲ್ದಾರರ ಕಚೇರಿಗಳಲ್ಲಿ, ಲಭ್ಯವಿರುತ್ತದೆ.   ನೋಂದಾಯಿತ ರಾಷ್ಟ್ರೀಯ, ರಾಜ್ಯ ಪಕ್ಷಗಳ ಅಧ್ಯಕ್ಷರುಗಳಿಗೆ ಮತ್ತು ರಾಷ್ಟ್ರೀಯ ಪಕ್ಷಗಳಿಂದ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮತದಾರರ ಯಾದಿ ನೀಡಲಾಗಿರುತ್ತದೆ.  ಅಲ್ಲದೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವೆಬ್‌ಸೈಟ್ಮುhttp://164.100.80.163/ceokarnataka/ಖಾಂತರವೂ ಮತದಾರರ ಯಾದಿಯನ್ನು ಪರಿಶೀಲಿಸಬಹುದಾಗಿದೆ ಎಂದು ಗುಲಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:
error