fbpx

ನೀರಿನ ಟ್ಯಾಂಕ್‌ ಕುಸಿದು ಆರು ಮಂದಿ ಮೃತ್ಯು

 ರಾಯಚೂರು, ಜ.3:  ನಿರ್ಮಾಣ ಹಂತದಲ್ಲಿದ್ದ ನೀರಿನ ಟ್ಯಾಂಕ್ ಕುಸಿದು 6 ಮಂದಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ರಾಯಚೂರಿನ ಯಾಪಲದಿನ್ನಿಯಲ್ಲಿ ನಡೆದಿದೆ. 
ಉರೂಸ್ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಸೇರಿದ್ದರು. ಈ ವೇಳೆ ಸ್ನಾನ ಮಾಡುತ್ತಿದ್ದಾಗ ನೀರಿನ ಟ್ಯಾಂಕ್ ಕುಸಿದಿದೆ. ಘಟನೆಯಲ್ಲಿ ಮಣ್ಣಿನಡಿಯಲ್ಲಿ ಇನ್ನು ಹಲವರು ಸಿಲುಕಿರುವ ಸಾಧ್ಯತೆ ಇದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಎನ್ನಲಾಗುತ್ತಿದೆ.
ಈ ಘಟನೆಯಿಂದ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ.
Please follow and like us:
error

Leave a Reply

error: Content is protected !!