ಗಂಗಾವತಿ, ಯಲಬುರ್ಗಾ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

  ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಯಲಬುರ್ಗಾ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ಪ್ರಸ್ತುತ ಗಂಗಾವತಿ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿಯು ೨೦೧೫ ರ ಮಾ. ೧೦ ಕ್ಕೆ ಮತ್ತು ಯಲಬುರ್ಗಾ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿಯು ೨೦೧೫ ರ ಮಾ. ೧೨ ಕ್ಕೆ ಮುಕ್ತಾಯವಾಗಲಿದೆ.  ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತುಗಳ ನಿಯಮಗಳ ಅನ್ವಯ ಹುದ್ದೆ ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.  ಏಳು ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳು, ಕೊಪ್ಪಳ ಇವರ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಫೆ. ೨೦ ರಂದು ಸಂಜೆ ೫-೩೦ ಗಂಟೆಯ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Please follow and like us:
error