ಉಪವಿಭಾಗಾಧಿಕಾರಿಯಾಗಿ ಇಸ್ಮಾಯಿಲ್ ಸಾಹೆಬ್ ಶಿರಹಟ್ಟಿ ಅಧಿಕಾರ ಸ್ವೀಕಾರ.

ಕೊಪ್ಪಳ ಸೆ. ೦೫  ಕೊಪ್ಪಳದ ನೂತನ ಉಪವಿಭಾಗಾಧಿಕಾರಿಯಾಗಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅಧಿಕಾರಿ ವಹಿಸಿಕೊಂಡಿದ್ದಾರೆ.
        ಉಪವಿಭಾಗಾಧಿಕಾರಿಯಾಗಿದ್ದ ಪಿ.ಎಸ್. ಮಂಜುನಾಥ್ ಅವರು ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದು, ಇವರ ಸ್ಥಾನಕ್ಕೆ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ಸರ್ಕಾರ ನೇಮಿಸಿತ್ತು.  ಇಸ್ಮಾಯಿಲ್ ಅವರು ಈ ಹಿಂದೆ ಜಿಲ್ಲೆಯ ಗಂಗಾವತಿ ತಾಲೂಕು ತಹಸಿಲ್ದಾರರಾಗಿ ಹಾಗೂ ಗುಲಬರ್ಗಾದಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದು, ಕೊಪ್ಪಳ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಗೊಂಡು ಬರುವ ಪೂರ್ವದಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರದ ಸೀಬರ್ಡ್ ನೌಕಾನೆಲೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Leave a Reply