You are here
Home > Koppal News > ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿ ಕೌಶಲ್ಯ ಹಾಗೂ ನಿರೂಪಣಾ ಕೌಶಲ್ಯ ತರಬೇತಿ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿ ಕೌಶಲ್ಯ ಹಾಗೂ ನಿರೂಪಣಾ ಕೌಶಲ್ಯ ತರಬೇತಿ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ೨೦೧೪-೧೫ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗಾಗಿ, ವೃತ್ತಿ ಕೌಶಲ್ಯ ಹಾಗೂ ನಿರೂಪಣಾ ಕೌಶಲ್ಯ ತರಬೇತಿ ನೀಡುವ ಮೂಲಕ ಪ್ರೋತ್ಸಾಹಿಸುವ ಕಾರ್ಯಕ್ರಮಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬಾರದ ಕಾರಣ, ಅರ್ಜಿಗಳನ್ನು ಸಲ್ಲಿಸಲು ದಿನಾಂಕ ೩೦-೧೧-೨೦೧೪ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ (ಹಾಗೂ ಕೆನೆಪದರ ವ್ಯಾಪ್ತಿಗೆ ಒಳಪಡದಂತಹ ಅಭ್ಯರ್ಥಿಗಳು) ಸೇರಿದ, ೧೮ ರಿಂದ ೩೫ ವರ್ಷಗಳೊಳಗಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ೨.೫ಲಕ್ಷ ಗಳನ್ನು ಮೀರದಿರುವ (ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರ ಕುಟುಂಬದ ವಾರ್ಷಿಕ ಆದಾಯ ರೂ೨.೦೦ ಲಕ್ಷಗಳನ್ನು ಮೀರಿರಬಾರದು) ಪತ್ರಿಕೋದ್ಯಮ/ ವಿದ್ಯುನ್ಮಾನ ಮಾಧ್ಯಮ/ ಸಮೂಹ ಸಂವಹನ ವಿಷಯಗಳಲ್ಲಿ ಕನಿಷ್ಠ ಶೇ. ೫೦ರಷ್ಟು ಅಂಕಗಳನ್ನು ಗಳಿಸಿರುವ ಪದವಿ/ ಸ್ನಾತಕೋತ್ತರ ಪದವೀಧರರು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು, ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 
ಅಭ್ಯರ್ಥಿಗಳು ಪ್ರಸ್ತುತ ಸಾಲಿನಲ್ಲಿ ಇದೇ ಸ್ವರೂಪದ ತರಬೇತಿಯನ್ನು ಸರ್ಕಾರದ ಯಾವುದೇ ಇಲಾಖೆಯಿಂದ ಪಡೆದಿರಬಾರದು. ಅರ್ಜಿಯ ನಿಗದಿತ ನಮೂನೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕೃತ ವೆಬ್‌ಸೈಟ್ www.karnatakavarthe.orgನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ ೩೦-೧೧-೨೦೧೪ ರೊಳಗಾಗಿ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿ ಗೈರುಹಾಜರಾದಲ್ಲಿ ಮೆರಿಟ್ ಆಧಾರದ ಮೇಲೆ ಮುಂದಿನ ಅಭ್ಯರ್ಥಿಗೆ ಅವಕಾಶ ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ ’ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. ೧೭, ವಾರ್ತಾ ಸೌಧ, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- ೫೬೦೦೦೧, ಅರ್ಜಿ ಹಾಗೂ  ದಾಖಲೆಗಳ ಸಾಫ್ಟ್ ಕಾಪಿಯನ್ನು scpinformationdepartment@gmail.com

Leave a Reply

Top