ಶಾಲೆಗಳ ಮರು ಹಂಚಿಕೆ : ಜೂ.೧೪ ರಂದು ಸಂದರ್ಶನಕ್ಕೆ ಹಾಜರಾಗಲು ಸೂಚನೆ

 ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿವಿಧ ವಸತಿ ಶಾಲೆಗಳಿಗೆ ಸೀಟು ಹಂಚಿಕೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಶಾಲೆಗಳ ಮರು ಹಂಚಿಕೆಗಾಗಿ ಜೂ.೧೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಅಡಿಟೋರಿಯಂ ಹಾಲ್, ನೆಲ ಮಹಡಿ, ಜಿಲ್ಲಾ ಆಡಳಿತ ಭವನ ಕೊಪ್ಪಳ ಇಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಸಂಬಂಧಪಟ್ಟ ವಿದ್ಯಾರ್ಥಿಗಳು ಸಂದರ್ಶನಕ್ಕೆ ತಪ್ಪದೆ ಹಾಜರಾಗಬೇಕು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಲ್ಲೇಶ್ ಅವರು ಸೂಚನೆ ನೀಡಿದ್ದಾರೆ.
 ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಕೊಪ್ಪಳ, ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಗಂಗಾವತಿ, ಕನಕಗಿರಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕುಷ್ಟಗಿ ಈ ಶಾಲೆಗಳಿಗೆ ಈಗಾಗಲೇ ಕೌನ್ಸಲಿಂಗ್ ಮುಖಾಂತರ ಸೀಟು ಹಂಚಿಕೆ ಮಾಡಲಾಗಿತ್ತು ಮೂಲಭೂತ ಸೌಲಭ್ಯಗಳಿಲ್ಲದೆ ಶಾಲೆ ಪ್ರಾರಂಭಿಸುವುದು ಸೂಕ್ತವಲ್ಲವೆಂದು ನಿರ್ದೇಶಕರು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಈ ಹಿಂದೆ ಆಯ್ಕೆ ಮಾಡಿದ ಸೀಟುಗಳನ್ನು ಬೇರೆ ಶಾಲೆಗಳಿಗೆ ಅಂದರೆ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಶಾಲೆಗಳಿಗೆ ಹಂಚಿಕೆ ಮಾಡಬೇಕಾದ ನಿಮಿತ್ಯ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Please follow and like us:
error

Related posts

Leave a Comment