ಪ್ರಸಕ್ತ ವರ್ಷದಲ್ಲೆ ಮೆಡಿಕಲ್ ಕಾಲೇಜು ಪ್ರಾರಂಕ್ಕೆ ಒಪ್ಪಿಗೆ ನೀಡುವಂತೆ ಸಂಸದ ಸಂಗಣ್ಣ ಕರಡಿ ಮನವಿ

ಕೊಪ್ಪಳ ಏ.  : ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕೊಪ್ಪಳದ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡುವಂತೆ ಸಂಸದ ಸಂಗಣ್ಣ ಕರಡಿ ಅವರು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ ಜಯಶ್ರೀ ಮೆಹ್ತಾ ಅವರನ್ನು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
  ಕೊಪ್ಪಳಕ್ಕೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಎಲ್ಲ ಮೂಲಭೂತ ಸೌಕರ್ಯಗಳು ಮತ್ತು ಬೋಧಕ ಸಿಬ್ಬಂದಿಗಳು ಸಹ ಇರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡುವಂತೆ ಸಂಸದ ಸಂಗಣ್ಣ ಕರಡಿ ಅವರು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ ಜಯಶ್ರೀ ಮೆಹ್ತಾ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.  ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಡಾ. ಶೇಖಣ್ಣ, ಗಣ್ಯರಾದ ರಮೇಶ್ ವೈದ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಸಂಸದರ ಮನವಿಗೆ ಎಂಸಿಐ ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾಲೇಜು ಪ್ರಾರಂಭಕ್ಕೆ ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ .

Leave a Reply