ಜಿ.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ : ಫೆ. ೦೭ ರಂದು ವಿಶೇಷ ಸಭೆ

  ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರ ವಿರುದ್ಧ ಅವಿಶ್ವಾಸ ಮಂಡನೆ ಕುರಿತಂತೆ ವಿಶೇಷ ಸಭೆ ಫೆ. ೦೭ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಜಿಲ್ಲಾ ಪಂಚಾಯತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಲು ೧೩ ಜನ ಜಿಲ್ಲಾ ಪಂಚಾಯತಿ ಸದಸ್ಯರು ಫೆ. ೦೭ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ಪಂಚಾಯತಿ ರಾಜ್ ಅಧಿನಿಯಮ ೧೯೯೩ ರ ಕಲಂ ೧೮೦ (ಎ) (ಬಿ) ಪ್ರಕಾರ ವಿಶೇಷ ಸಭೆ ಕರೆದಿದ್ದು, ಜಿಲ್ಲಾ ಪಂಚಾಯತಿಯ ಎಲ್ಲ ಸದಸ್ಯರು ಸಭೆಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ತಿಳಿಸಿದ್ದಾರೆ.
Please follow and like us:
error