ಪ್ರಾದೇಶಿಕ ಆಯುಕ್ತರಿಂದ ನ. ೩೦ ಮತದಾರರ ಪರಿಷ್ಕರಣೆ ಸಭೆ : ಸೂಚನೆ

 ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯ ಕುರಿತಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು ನ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಕುಷ್ಟಗಿಯ ಸರ್ಕಿಟ್ ಹೌಸ್‌ನಲ್ಲಿ ಸಭೆ ನಡೆಸುವರು.
  ಕೊಪ್ಪಳ ಜಿಲ್ಲೆಯ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯದ ವೀಕ್ಷಕರಾಗಿರುವ ಕಲಬುರಗಿ ಪ್ರಾದೇಶಿಕ ಆಯುಕ್ತರು, ಪರಿಶೀಲನಾ ಸಭೆ ನಡೆಸಲಿರುವುದರಿಂದ, ಕೊಪ್ಪಳ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ರಾಜಕೀಯ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಅಥವಾ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್  ತಿಳಿಸಿದ್ದಾರೆ.
Please follow and like us:
error

Related posts

Leave a Comment