ಡಿ.೦೭ ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ.೦೭ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಕೊಪ್ಪಳ ಸಾಹಿತ್ಯ ಭವನದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದ ಜರುಗಲಿದೆ.
 ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಕ್ರೀಡಾ ಜ್ಯೋತಿಯನ್ನು ಸಂಸದ ಶಿವರಾಮಗೌಡ ಅವರು ಬೆಳಗಿಸಲಿದ್ದಾರೆ. ಜಿ.ಪಂ. ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ ಅವರು ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಸಂಗಣ್ಣ ಕರಡಿ ಅವರು ವಹಿಸುವರು.
ಮುಖ್ಯ ಅತಿಥಿಗಳಾಗಿ ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ತಂಗಡಗಿ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೆಕಾಳಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್.ಮಂಜುನಾಥ ಪ್ರಸಾದ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರು ಭಾಗವಹಿಸುವರು ಎಂದು ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಲಾಸ್ ಎನ್.ಘಾಡಿ ತಿಳಿಸಿದ್ದಾರೆ.

Related posts

Leave a Comment