You are here
Home > Koppal News > `ಆಪರೇಷನ್ ಕಮಲದಿಂದ ಜನತಂತ್ರ ವ್ಯವಸ್ಥೆಗೆ ಧಕ್ಕೆ-ಕೆ.ಎಚ್.ಮುನಿಯಪ್ಪ

`ಆಪರೇಷನ್ ಕಮಲದಿಂದ ಜನತಂತ್ರ ವ್ಯವಸ್ಥೆಗೆ ಧಕ್ಕೆ-ಕೆ.ಎಚ್.ಮುನಿಯಪ್ಪ

ಕೊಪ್ಪಳ. ಸೆ. ೨೨: ಶಾಸಕರ ಖರೀದಿ ಪ್ರಕ್ರಿಯೆಯ ಆಪರೇಷನ್ ಕಮಲ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.ಅವರು ಗುರುವಾರ ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಮದಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಪಕ್ಷದ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸಂಗಣ್ಣ ಕರಡಿ ಅವರು ಹಣದ ಆಸೆಗಾಗಿ ಮತದಾರರು ನೀಡಿದ ಅಧಿಕಾರವನ್ನು ಮಾರಾಟ ಮಾಡಿದ್ದಾರೆ. ೫ವರ್ಷ ಅಧಿಕಾರ ನಡೆಸಿ ಎಂದು ಚುನಾಯಿಸಿ ಕಳಿಸಿದ ಮತದಾರರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.ಸರ್ವರಿಗೂ ಸಮಬಾಳು-ಸಮಪಾಲು ಎಂಬ ಆಶಯ ಹೊಂದಿದ್ದು, ಭಾರತ ನಿರ್ಮಾಣ, ಉದ್ಯೋಗ ಖಾತರಿ ಯೋಜನೆಗಳಂತಹ ೨೦ ಅಂಶದ ಕಾರ್ಯಕ್ರಮಗಳನ್ನು ಹಾಕಿಕೊಂಡು ದೇಶದ ಎಲ್ಲ ವರ್ಗಗಳ ಹಿತ ಕಾಪಾಡುವ ಬದ್ಧತೆ ಹೊಂದಿರುವ ಪಕ್ಷ ನಮ್ಮದು ಎಂದರು.ಈ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ ಅವರನ್ನು ಬೆಂಬಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಎಚ್.ಆಂಜನೇಯ, ಶಾಸಕ ಮಹಾಂತೇಶ ಕೌಜಲಗಿ, ಜಿ.ಪಂ.ಉಪಾಧ್ಯಕ್ಷೆ ಡಾ. ಸೀತಾ ಗೂಳಪ್ಪ ಹಲಿಗೇರಿ, ಕಾಂಗ್ರೆಸ್ ಮುಖಂಡರಾದ ಗೂಳಪ್ಪ ಹಲಿಗೇರಿ, ಕೆಪಿಸಿಸಿ ಕಾರ್ಯದರ್ಶಿ ರಮೇಶ, ಗ್ರಾ.ಪಂ.ಅಧ್ಯಕ್ಷ ನಿಂಗಪ್ಪ ಬಡಿಗೇರ ಮತ್ತಿತರರು ಉಪಸ್ಥಿತರಿದ್ದರು. 

Leave a Reply

Top