fbpx

ಕೊಪ್ಪಳ : ನೀರು ಮತ್ತು ನೈರ್ಮಲ್ಯ ಸಪ್ತಾಹ ಜಾಗೃತಿ ವಾಹನಕ್ಕೆ ಚಾಲನೆ

: ದೇಶಾದ್ಯಂತ ಮಾ.೧೬ ರಿಂದ ಆರಂಭಗೊಂಡಿರುವ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಜಾಗೃತಿ ಸಪ್ತಾಹ ಮಾಹಿತಿಯುಳ್ಳ ವಾಹನಕ್ಕೆ ಬುಧವಾರ ಕೊಪ್ಪಳ ತಾಲೂಕಾ ಪಂಚಾಯತ್ ಆವರಣದಲ್ಲಿ ಚಾಲನೆ ನೀಡಲಾಯಿತು.

  ಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಕೊಪ್ಪಳ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ. ಕೃಷ್ಣಮೂರ್ತಿ, ಭಾರತ ಹಳ್ಳಿಗಳಿಂದ ಕೂಡಿದ ದೇಶವಾಗಿದೆ. ದೇಶದ ಜನಸಂಖ್ಯೆಯ ಶೇಕಡಾ.೭೫ ರಷ್ಟು ಜನ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ಮನದಟ್ಟಾಗಿಸಲು ಕೇಂದ್ರ ಸರಕಾರ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಪ್ತಾಹ ಆಚರಿಸಲಾಗುತ್ತಿದೆ.  ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇದರಿಂದ ಗ್ರಾಮೀಣ  ಜನರ ಆರೋಗ್ಯದ ಜೊತೆಗೆ ಸಮಾಜದಲ್ಲಿ ನೈರ್ಮಲ್ಯ ಕಾಪಾಡಲು ಸಹಕಾರಿಯಾಗುತ್ತದೆ. ಕೊಪ್ಪಳ ತಾಲೂಕಿನಿಂದ ನಿಯೋಜಿಸಿರುವ ಜಾಗೃತಿ ವಾಹನವು ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಜನರಿಗೆ ಅರಿವು ಮೂಡಿಸಲಿದೆ ಎಂದರು.
  ಸಹಾಯಕ ನಿರ್ದೇಶಕ ಅಶೋಕ ಕುಲಕರ್ಣಿ, ವ್ಯವಸ್ಥಾಪಕ ಸಂಗಮೇಶ.ಎನ್.ಪಾಟೀಲ್, ಸಹಾಯಕ ಲೆಕ್ಕಾಧಿಕಾರಿ ಖಾಜಾಹುಸೇನ್, ಸುಶೀಲೆಂದ್ರರಾವ್ ದೇಶಪಾಂಡೆ, ಎಮ್‌ಐಎಸ್ ಸಂಯೋಜಕ ಮಂಜುನಾಥ ಜವಳಿ, ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಂಯೋಜಕ ಸಂತೋಷ ನಂದಾಪೂರ, ತಾಲೂಕಾ ಪಂಚಾಯಿತಿಯ ಸಿಬ್ಬಂದಿ ಹಾಗೂ ಇತರರು ಇದ್ದರು. 
Please follow and like us:
error

Leave a Reply

error: Content is protected !!