ವಸತಿ ಶಾಲೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೊಪ್ಪಳ ಜು. : ಸಮಾಜಕಲ್ಯಾಣ ಇಲಾಖೆಯು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಗಾಗಿ ಜು. ೨೪ ರಿಂದ ೨೭ ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿರುವುದರಿಂದ, ಪರೀಕ್ಷೆಗಳು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಅನ್ವಯ ಜು. ೨೪ ರಂದು ಬೆಳಿಗ್ಗೆ ೮ ಗಂಟೆಯಿಂದ ಜು. ೨೭ ರಂದು ಸಂಜೆ ೬ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ ೧೪೪ ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಪರೀಕ್ಷಾ ಸಮಯದಲ್ಲಿ ಯಾವುದೇ ಜೆರಾಕ್ಸ್, ಕಂಪ್ಯೂಟರ್ ಕೇಂದ್ರಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಯಾವುದೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು, ಸಾರ್ವಜನಿಕರ ಸಭೆ, ವಿಜಯೋತ್ಸವ ಹಾಗೂ ಪ್ರತಿಭಟನೆಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶಿಸಿದ್ದಾರೆ.

Please follow and like us:
error