You are here
Home > Koppal News > ಶಾಸಕ ದೊಡ್ಡನಗೌಡರಿಗೆ ಇಂದು ಬಸವ ಶಿರೋಮಣಿ ಪ್ರಶಸ್ತಿ ಪ್ರದಾನ

ಶಾಸಕ ದೊಡ್ಡನಗೌಡರಿಗೆ ಇಂದು ಬಸವ ಶಿರೋಮಣಿ ಪ್ರಶಸ್ತಿ ಪ್ರದಾನ

ಕೊಪ್ಪಳ, ಮೇ. ೬. ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲರಿಗೆ ಇಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಬಸವ ಶಿರೋಮಣಿ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವದು ಎಂದು ಸಂಸ್ಥೆಯ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಟ್ರಸ್ಟ್ ಹಮ್ಮಿಕೊಂಡಿರುವ ಐದು ದಿನಗಳ ವಚನ ವೈಭವ ಸಾಂಸ್ಕೃತಿಕ ಉತ್ಸವ ಹಾಗೂ ಅಥಣಿ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ಸಮ್ಮೇಳನಾಧ್ಯಕ್ಷತೆಯ ೭ನೇ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಎರಡನೇ ಅವಧಿಗೆ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲರ ಸಾಮಾಜಿಕ ಕಳಕಳಿ ಮತ್ತು ರಾಜಕೀಯ ಮುತ್ಸದ್ಧಿತನವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತುಮಕೂರಿನ ಹಿರೇಮಠದ ಡಾ|| ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ, ವಿಧಾನ ಪರಿಷತ್ ಸದಸ್ಯ ಸಿ. ಹೆಚ್. ವಿಜಯಶಂಕರ, ಮಾಜಿ ಸಚಿವ ಶಶಿಕಾಂತ ಅಕ್ಕಪ್ಪ ನಾಯಕ್ ಪ್ರಶಸ್ತಿ ಪ್ರದಾನ ಮಾಡುವರು, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಎಸ್. ಜಿ. ನಂಜಯ್ಯನಮಠ, ಮುಖ್ಯ ಮಂತ್ರಿಯವರ ಪತ್ರಿಕಾ ಕಾರ್ಯದರ್ಶಿ ದಿನೇಶ್ ಅಮೀನಮಟ್ಟು, ಮಾಜಿ ವಿರೋಧ ಪಕ್ಷದ ನಾಯಕ ಎಂ. ನಾಗರಾಜು, ಚಲನಚಿತ್ರ ನಟಿ ಮೀನಾರಾಜ್ ಮುಂತಾದವರು ಭಾಗವಹಿಸುವರು. 
ಇದೇ ಸಂದರ್ಭದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದ ಸೇವೆಗೆ ಕುಷ್ಟಗಿಯ ಶಿಕ್ಷಕ ನಟರಾಜ ಸೋನಾರರವರಿಗೆ ಬಸವ ಶಿರೋಮಣಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವದು, ಖ್ಯಾತ ಸಂಗೀತ ನಿರ್ದೇಶಕ ದೇವೇಂದ್ರಕುಮಾರ ಮುಧೋಳರವರ ಸಾರಥ್ಯದಲ್ಲಿ ಬಸವಣ್ಣ ಮತ್ತು ೨೫೫೫ ವಚನಕಾರರ ವಚನ ಗಾಯನ ನಡೆಯಲಿದೆ ಎಂದು ತಿಳಿಸಿದ್ದಾರೆ.

Leave a Reply

Top