ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಪರೀಕ್ಷೆ ತರಬೇತಿ.

ಕೊಪ್ಪಳ
ಫೆ. ೦೪ (ಕ ವಾ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ
ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಮಾರ್ಚ್ ೧ ರಿಂದ ನಡೆಯಲಿರುವ ‘ಸರ್ಕಾರಿ
ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಹತ್ತು ದಿನಗಳ ವಿಶೇಷ
ತರಬೇತಿ ಕಾರ್ಯಗಾರ ಹಮ್ಮಿಕೊಂಡಿದೆ.
    ಆಸಕ್ತರು ಫೆ. ೦೯ ರೊಳಗಾಗಿ ಮೈಸೂರು
ಮುಕ್ತಗಂಗೋತ್ರಿಯಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ
‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ ೧೦
ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹು.  ಹೆಚ್ಚಿನ
ವಿವರಗಳಿಗೆ ೦೮೨೧-೨೫೧೫೯೪೪ ಕ್ಕೆ ಸಂಪರ್ಕಿಸಬಹುದು ಎಂದು ಕರಾಮುವಿ ಸ್ಪರ್ಧಾತ್ಮಕ
ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ತಿಳಿಸಿದ್ದಾರೆ.
Please follow and like us:
error