ಸಾರಿಗೆ ಇಲಾಖೆ ಡಿ.೧೨ ರಂದು ರಾಷ್ಟ್ರೀಯ ಲೋಕ ಅದಾಲತ್.

ಕೊಪ್ಪಳ,
ಡಿ.೦೯ (ಕ ವಾ)ಸಾರಿಗೆ ಇಲಾಖೆ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ ದಿನದ
ಅಂಗವಾಗಿ ಡಿ.೧೨ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳ ನಗರದ ಪ್ರಾದೇಶಿಕ ಸಾರಿಗೆ
ಅಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ದಿನದ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿದೆ.
     ಸವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ
ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರು ಡಿ.೧೨ ರಂದು ಭಾರತದಾದ್ಯಂತ, ಆಯಾ
ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು
ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಲೋಕ
ಅದಾಲತ್‌ನಲ್ಲಿ ಚಾಲನಾ ಅನುಜ್ಞಾ ಪತ್ರ, ರಹದಾರಿ ವಿತರಣೆ, ಬಾಕಿ ಪ್ರಕರಣಗಳ ವಿಲೇವಾರಿ
ಮತ್ತು ಇನ್ನಿತರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ತಮ್ಮ ಕುಂದುಕೊರತೆಗಳ
ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

Leave a Comment